ಫೆ.17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಡಿಸಿಎಂ
ಬೆಂಗಳೂರು: ಮುಂದಿನ ಫೆಬ್ರವರಿ 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮೊದಲು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆ ಬಳಿಕ ಅದನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಈಗ ಫೆ.17ರಂದು ನಡೆಸಲು ತೀರ್ಮಾನಿಸಲಾಗಿದೆ.
’ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ಸಮಾವೇಶ ಮಂಗಳೂರಿನಲ್ಲಿ ನಡೆಯಲಿದೆ” ಎಂದು ತಿಳಿಸಿದ್ದಾರೆ.