ಬಜೆಟ್ ಅಧಿವೇಶನಕ್ಕೂ ಮುನ್ನ ಇಂದು ಸರ್ವಪಕ್ಷಗಳ ಸಭೆ ಕರೆದ ಸರ್ಕಾರ
ನವದೆಹಲಿ: ಸರ್ಕಾರವೂ ಬಜೆಟ್ ಅಧಿವೇಶನಕ್ಕೂ ಮುನ್ನ ಜನವರಿ 30 ರ ಇಂದು ಸಂಸತ್ತಿನಲ್ಲಿ ವಿವಿಧ ಪಕ್ಷಗಳ ನಾಯಕರ ಸಭೆಯನ್ನು ಕರೆದಿದೆ.
ಈ ಬಾರಿ ಜ.31ರಿಂದ ಫೆಬ್ರವರಿ 9ರ ನಡುವೆ ಒಂದು ಸಣ್ಣ ಅಧಿವೇಶನವಾಗಿದ್ದು, ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಹೊಸ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ.
ಅಧಿವೇಶನ ಆರಂಭಕ್ಕೂ ಮುನ್ನ ಸರ್ವಪಕ್ಷಗಳ ಸಭೆ ಕರೆಯುವುದು ವಾಡಿಕೆ. ವಿವಿಧ ಪಕ್ಷಗಳ ನಾಯಕರು ಸಂಸತ್ತಿನಲ್ಲಿ ಪ್ರಸ್ತಾಪಿಸಲು ಬಯಸುವ ಹಲವು ವಿಷಯಗಳನ್ನು ಇಲ್ಲಿ ಚರ್ಚೆಗೆ ಒಡ್ಡಲಾಗುತ್ತದೆ. ಜೊತೆಗೆ ಸರ್ಕಾರವು ತನ್ನ ಕಾರ್ಯಸೂಚಿಯ ಬಗ್ಗೆ ವಿರೋಧ ಪಕ್ಷಗಳಿಗೂ ಒಂದು ನೋಟವನ್ನು ನೀಡುತ್ತದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಅಧಿವೇಶನ ಆರಂಭವಾಗಲಿದೆ.