Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬರೋಬ್ಬರಿ 28 ಕೋಟಿಗೆ ಬಿಡ್ ಆದ ರಕ್ತ ಚಂದನ….!!

ಮಂಗಳೂರು: ಮಂಗಳೂರಿನ ಪಣಂಬೂರು ಬಂದರಿನ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದ ರಕ್ತ ಚಂದನವನ್ನು ಆನ್‌ಲೈನ್‌ನಲ್ಲಿ ಮೂರು ಪ್ರತಿಷ್ಠಿತ ಏಜೆನ್ಸಿಗಳು ಬರೋಬ್ಬರಿ 28 ಕೋಟಿ ರು.ಗೆ ಬಿಡ್‌ನಲ್ಲಿ ಖರೀದಿಸಿವೆ.

4 ಪ್ರಕರಣಗಳಲ್ಲಿ ಮಂಗಳೂರಿನ ಕಸ್ಟಮ್ಸ್ ಅಧಿಕಾರಿಗಳು ರಕ್ತ ಚಂದನ ವಶಪಡಿಸಿಕೊಂಡಿದ್ದರು. ಇದರಲ್ಲಿ ಸುಮಾರು 56.2 ಮೆಟ್ರಿಕ್ ಟನ್ ರಕ್ತಚಂದನವನ್ನು ಹರಾಜು ಹಾಕಲಾಗಿತ್ತು. ಮಂಗಳೂರು ಬ೦ದರಿನಿಂದ ಅಕ್ರಮವಾಗಿ ವಿದೇಶಕ್ಕೆ ಕಳ್ಳಸಾಗಾಟ ಮಾಡುತ್ತಿದ್ದ ರಕ್ತಚಂದನ ಇದಾಗಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಅರಣ್ಯ ಇಲಾಖೆ ಆನ್‌ ಲೈನ್ ಮೂಲಕ ಹರಾಜು ಹಾಕಿದೆ.

2014 ಆ.21ರಂದು ವಿದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 16.99 ಟನ್ ರಕ್ತಚಂದನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಪಡಿಸಿದ್ದರು. 2020ರ ಜ.10ರಂದು ಥಾಯ್ಲೆಂಡ್‌ಗೆ ಸಾಗಿಸಲು ಯತ್ನಿಸುತ್ತಿದ್ದ 2.20 ಕೋಟಿ ರು. ಮೌಲ್ಯದ ರಕ್ತಚಂದನ ವಶಕ್ಕೆ ಪಡೆಯಲಾಗಿತ್ತು. 2022ರ ಜೂ.3ರಂದು ತಿರುಪತಿಯಿಂದ ಮಂಗಳೂರು ಮೂಲಕ ಸಿಂಗಾಪುರಕ್ಕೆ ಸಾಗಿಸಲು ವಿಂಗಡಣೆ ಯತ್ನಿಸುತ್ತಿದ್ದ 4.14 ಕೋಟಿ ರು. ಮೌಲ್ಯದ ರಕ್ತಚಂದನ ವಶಕ್ಕೆ ಪಡೆಯಲಾಗಿತ್ತು.

ನ್ಯಾಚುರಲ್ ಕನ್ನೊಜೆನ್ಸಿ ಏಜೆನ್ಸಿ 10 ಲಾಟ್‌ಗೆ 14.5 ಕೋಟಿ ರು. ಬಿಡ್ ಹಾಗೂ ಯಮಾ ರಿಬನ್ಸ್ ಏಜೆನ್ಸಿ ಲಾಟ್‌ಗೆ 4.2 ಕೋಟಿ ರು. ಬಿಡ್ ಜತೆಗೆ ಅಕ್ಷಾ 3 ಲಾಟ್‌ 1.6 ಕೋಟಿ ರು. ಬಿಡ್‌ಗೆ ಖರೀದಿ ಮಾಡಿದೆ.

ಮೂರು ಬಿಡ್‌ಗಳ ಒಟ್ಟು ಮೊತ್ತ ತೆರಿಗೆ ಸೇರಿ 28 ಕೋಟಿ ರು ಆಗಿದೆ.