Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಬರ ಪಟ್ಟಿಗೆ ರಾಜ್ಯದ 62 ತಾಲೂಕುಗಳು ಸೇರ್ಪಡೆ’-ಕೃಷ್ಣಭೈರೇಗೌಡ

ಚಿತ್ರದುರ್ಗ: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬೆಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಬರ ಕಾಡುತ್ತಿದ್ದು, ಹಲವು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಈ ಕುರಿತು ಕಂದಾಯ ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯಿಸಿ, ಆಗಸ್ಟ್ 18ಕ್ಕೆ ಮಳೆ ಕೊರೆತೆ ಇರುವ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸಿದ್ದೇವೆ. ಒಂದು ಸುತ್ತಿನ ಬೆಳೆ ಸಮೀಕ್ಷೆ ಪ್ರಕಾರ 62 ತಾಲೂಕು ಬರ ಪಟ್ಟಿಗೆ ಸೇರಿದೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿಯಂತೆ ಬರ ಪಟ್ಟಿಗೆ ಆಯ್ಕೆಯಾಗಿದೆ ಎಂದು ತಿಳಿಸಿದರು.

ಇನ್ನೊಂದು ಸುತ್ತು ಬೆಳೆ ಸಮೀಕ್ಷೆ ಮಾಡಬೇಕು ಎಂದಾಗ ಉಳಿದ 51 ತಾಲೂಕು ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. ಸೆಪ್ಟೆಂಬರ್ 2ಕ್ಕೆ 83 ತಾಲ್ಲೂಕು ಬರ ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇವೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಸಮೀಕ್ಷೆ ವರದಿ ಬರುತ್ತದೆ. ಕೇಂದ್ರದ ಮಾರ್ಗಸೂಚಿ ಪ್ರಕಾರ ಬರ ಘೋಷಣೆ ಮಾಡುತ್ತೇವೆ. ಕೇಂದ್ರ ಸರ್ಕಾರಕ್ಕೆ ಮನವಿಯನ್ನೂ ಕೂಡಾ ನಾವು ನೀಡುತ್ತೇವೆ ಎಂದರು.

ಕೇಂದ್ರ ಸರ್ಕಾರದ ಮಾರ್ಗಸೂಚಿ ಬದಲಾವಣೆಗೆ ಮನವಿ ಮಾಡುತ್ತೇವೆ. ಜನರ ನಿರೀಕ್ಷೆಯಂತೆ ಬರ ಘೋಷಣೆ ಮಾಡಲು ಆಗಲ್ಲ. ನಮ್ಮ ಸರ್ಕಾರ ಬಂದ ಬಳಿಕ ಪತ್ರ ಬರೆದಿದ್ದೇವೆ. ಇನ್ನೊಂದು ಬಾರಿ ಮಾನದಂಡ ಬದಲಾವಣೆ ಮಾಡಿ ಎಂದು ಮನವಿ ಮಾಡುತ್ತೇವೆ. ಜನರಿಗೆ ನ್ಯಾಯ ಕೊಡಲು ಕೇಂದ್ರ ಸರ್ಕಾರದ ಮಾನದಂಡ ಕೈ ಕಟ್ಟಿ ಹಾಕಿದಂತಾಗಿದೆ ಎಂದು ಕೇಂದ್ರ ಸರ್ಕಾರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.