ಬಾಂಗ್ಲಾದೇಶದಲ್ಲಿ 5.6 ತೀವ್ರತೆಯ ಭೂಕಂಪ
ಢಾಕಾ: ಶನಿವಾರ ಬೆಳಗ್ಗೆ ನೆರೆಯ ಬಾಂಗ್ಲಾದೇಶದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದ್ದರಿಂದ, ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ಕಂಪನದ ಅನುಭವವಾಗಿದೆ.
ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಆಗ್ನೇಯ ಬಾಂಗ್ಲಾದೇಶದಲ್ಲಿ 55 ಕಿಮೀ ಆಳದಲ್ಲಿ ಬೆಳಿಗ್ಗೆ 9.05 ಕ್ಕೆ ಭೂಕಂಪ ಸಂಭವಿಸಿದೆ.
“ನಾವು ಇನ್ನೂ ಅಂತಿಮ ವರದಿಯನ್ನು ಪಡೆಯಬೇಕಾಗಿದೆ. ಸದ್ಯಕ್ಕೆ, ಭೂಕಂಪದಿಂದ ಯಾವುದೇ ಹಾನಿಯಾದ ವರದಿಯಾಗಿಲ್ಲ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೋಲ್ಕತ್ತಾ ಪೊಲೀಸ್ ಮತ್ತು ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್ನ ಅಧಿಕಾರಿಗಳು ಕೂಡಾ ಸ್ಥಳೀಯವಾಗಿ ಯಾವುದೇ ಜೀವ ಅಥವಾ ಆಸ್ತಿ ಹಾನಿ ವರದಿಯಾಗಿಲ್ಲ ಎಂದು ಹೇಳಿದ್ದಾರೆ.