ಬಾಗಲಕೋಟೆ – ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ನಾಲ್ವರು ಸಾವು
ಬಾಗಲಕೋಟೆ : ಕಬ್ಬು ತುಂಬಿಕೊಂಡು ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಹುಬ್ಬಳ್ಳಿ ಸೋಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ನಾಲ್ಕು ಗಂಟೆಗೆ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಮಲ್ಲು ಪೂಜಾರಿ (24), ಕಲ್ಲಪ್ಪ ಕೌಟಗಿ, (34), ಕಾಮಾಕ್ಷಿ ಬಡಿಗೇರ (35), ತುಕಾರಾಮ್ ತಳೇವಾಡ (30) ಎಂಬುವವರು ಮೃತರಾಗಿದ್ದಾರೆ. ಮೃತರನ್ನು ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದವರು ಎಂದು ಗುರುತಿಸಲಾಗಿದೆ.ಬಾಗಲಕೋಟೆ ಎಸ್.ಪಿ. ಅಮರನಾಥ ರೆಡ್ಡಿ ನೀಡಿದ್ದಾರೆ.