Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬಿಎಂಟಿಸಿ ವೋಲ್ವೋ ಬಸ್ ಡಿಕ್ಕಿ: ಬೈಕ್ ಸವಾರ ಮೃತ್ಯು

ಬೆಂಗಳೂರು:ಬಿಎಂಟಿಸಿ ವೋಲ್ವೋ ಬಸ್ಸೊಂದು ಹರಿದು ಬೈಕ್ ಸವಾರ ಮೃತಪಟ್ಟ ಘಟನೆ ಡಿ 5 ರಂದು ಮಾರತ್ತಹಳ್ಳಿಯ ವರ್ತೂರು ಮುಖ್ಯ ರಸ್ತೆಯಲ್ಲಿ ನಡೆದಿದೆ.

ಬೈಕ್​ ಸವಾರ ಎಳಂಗೋವನ್ ಸೆಂಕತ್ತವಲ್(43) ಮೃತ ದುರ್ದೈವಿ.

ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಮೃತ ಬೈಕ್​ ಸವಾರ ಎಳಂಗೋವನ್ ಸೆಂಕತ್ತವಲ್ ತೆರಳುತ್ತಿದ್ದ ಸಮಯದಲ್ಲಿ ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ವೊಲ್ವೋ ಬಸ್ ಡಿಕ್ಕಿ ಹೊಡೆದಿದೆ.

ಅಪಘಾತದಿಂದ ಬೈಕ್ ಸವಾರನ ತಲೆ ಹಾಗೂ ಮುಖದ ಭಾಗಕ್ಕೆ ಗಂಭೀರ ಗಾಯವಾಗಿದ್ದು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುಲಾಗಿದ್ದು ಆದರೂ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಹೆಚ್​ಎಎಲ್​​ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.