ಬಿಜೆಪಿಗೆ ಗುಡ್ ಬಾಯ್ ನೀಡಿದ ಖ್ಯಾತ ನಟಿ!
ತೆಲಂಗಾಣ: ಖ್ಯಾತ ನಟಿ ವಿಜಯಶಾಂತಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂದು ವರದಿಯಾಗಿದೆ.
ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ವಿಜಯಶಾಂತಿ ಹೆಸರು ಸೇರ್ಪಡೆಯಾಗಿಲ್ಲ. ಇದರಿಂದಾಗಿ ಅವರು ಹಾಗೂ ಅವರ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ.
ಬಿಆರ್‌ಸ್ ಕುಟುಂಬದ ರಾಜಕೀಯ ಆಡಳಿತದಿಂದ ಜನರನ್ನು ರಕ್ಷಿಸಲು ಕಾಂಗ್ರೆಸ್ ಹೋರಾಡಬೇಕು’ ಎಂದಿದ್ದಾರೆ. ನಟಿ ವಿಜಯಶಾಂತಿ ಕನ್ನಡಲ್ಲಿ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.