Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಬಿಜೆಪಿ-ಜೆಡಿಎಸ್​ ಮೈತ್ರಿ ವಿಚಾರದ ಬಗ್ಗೆ ನಾನು ಏನೂ ಮಾತನಾಡಲ್ಲ:’ -ಹೆಚ್​​ಡಿ ದೇವೇಗೌಡ

ನವದೆಹಲಿ: ಬಿಜೆಪಿ-ಜೆಡಿಎಸ್​ ಮೈತ್ರಿ ವಿಚಾರದ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ಈ ಹಿಂದೆಯೇ ಹೇಳಿದ್ದೇನೆ. ಮೈತ್ರಿ ವಿಚಾರದ ಬಗ್ಗೆ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಮಾತನಾಡುತ್ತಾರೆ ಎಂದು ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಸಂಬಂಧ ಇಂದು ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರನ್ನು ಭೇಟಿಯಾಗಲಿದ್ದಾರೆ.

ಇನ್ನು ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದ್ದು, ಕಾವೇರಿ ನದಿ ವಿಚಾರದಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದೇನೆ. ಕಾವೇರಿ ವಿಚಾರದಲ್ಲಿ ನಾನು ಯಾವುದೇ ಸಲಹೆ ಕೊಡಲ್ಲ. ಸುಪ್ರೀಂಕೋರ್ಟ್​ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಈಗ ನಾನು ಏನೂ ಮಾತಾಡಲ್ಲ. ನೀರು ಬಿಟ್ಟಿದ್ದು ತಪ್ಪು ಅಂತಾ ಪಕ್ಷದ ಪರ ಹೆಚ್​​ಡಿ ಕುಮಾರಸ್ವಾಮಿ ಹೇಳಿದ್ದಾರೆ ಎಂದರು.