ಬಿಜೆಪಿ ತೊರೆದ ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಶಾಂತಾ ವೈಎಸ್ಆರ್ ಸಿಗೆ ಸೇರ್ಪಡೆ
ಬಳ್ಳಾರಿ: ಮಾಜಿ ಸಚಿವ ಶ್ರೀರಾಮುಲು ಸಹೋದರಿ ಮಾಜಿ ಸಂಸದೆ ಜೆ. ಶಾಂತಾ ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
ಕರ್ನಾಟಕ ಬಿಜೆಪಿ ತೊರೆದು ಆಂಧ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟ ಶಾಂತಾ ಅವರು ಆಂಧ್ರ ಸಿಎಂ ಜಗನ್ಮೋಹನರೆಡ್ಡಿ ನೇತೃತ್ವದಲ್ಲಿ ವಿಜಯವಾಡ ತಾಡಿಪಲ್ಲಿ ಸಿಎಂ ಕ್ಯಾಂಪ್ ಆಫೀಸ್ ನಲ್ಲಿ ವೈಎಸ್ಆರ್ಪಿ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಸ್ವತಃ ವೈಎಸ್ಆರ್ ಕಾಂಗ್ರೆಸ್ ಪಕ್ಷ ತನ್ನ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ
ಮುಂದಿನ ಲೋಕಸಭೆಯ ಚುನಾವಣೆಯಲ್ಲಿ ವೈಎಸ್ಆರ್ಪಿಯಿಂದ ಹಿಂದುಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ. ಹಿಂದುಪುರ ಕ್ಷೇತ್ರ ಅನಂತಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರಲಿದೆ. ಹಿಂದುಪುರ ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯ ನಾಲ್ಕುವರೆ ಲಕ್ಷ ಮತದಾರರಿದ್ದಾರೆ. ರಾಜ್ಯದಲ್ಲಿ ವಾಲ್ಮೀಕಿ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ್ದರೆ, ಆಂಧ್ರದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದೆ.
ಜೆ.ಶಾಂತಾ 2009ರಲ್ಲಿ ಶ್ರೀರಾಮುಲು ಸಹಕಾರದಿಂದ ಬಳ್ಳಾರಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.