Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬಿಜೆಪಿ ರಾಜ್ಯಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಬಗ್ಗೆ ಸಿಟಿ ರವಿ ಹೇಳಿದ್ದೇನು.?

 

 

ಬೆಂಗಳೂರು : ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ವಿಚಾರವಾಗಿ ಬಿಜೆಪಿಯ ಮಾಜಿ ಶಾಸಕ ಸಿಟಿ ರವಿ ಅಸಮಾಧಾನ ಹೊರಹಾಕಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬದಲಾಗದಿರುವುದು ಕಾರ್ಯಕರ್ತ ಅನ್ನೋದು. ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಎಂದು ಅಸಮಾಧಾನ ಹೊರಹಾಕಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅ ಅವರು, 35 ವರ್ಷಗಳ ರಾಜಕೀಯ ಜೀವನದಲ್ಲಿ ಬಹಳಷ್ಟು ವಿಷಯ ಮಾತಾಡಿಬಿಟ್ಟಿದ್ದೇನೆ. ಈಗ ಏನಾದರೂ ಮಾತನಾಡಿದರೆ ನಮ್ಮ ಮಾತೆ ನಿಮಗೆ ತಿರುಗುಬಾಣವಾಗುತ್ತೆ. ಪಕ್ಷ ನೇಮಕ ಮಾಡಿದೆ. ಇನ್ನೇನಿದ್ರೂ ಪಕ್ಷ ಕಟ್ಟಿ ಬೆಳೆಸುವ ಕೆಲಸ ಮಾಡಬೇಕು ಎಂದರು.ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನ ಗಳಿಸುವ ಹೊಣೆ ಇದೆ ಯಶಸ್ವಿಯಾಗಲಿ. ಬೂತ್ ಅಧ್ಯಕ್ಷ ಸ್ಥಾನದಿಂದ ರಾಷ್ಟ್ರ ಪ್ರಧಾನ ಕಾರ್ಯದರ್ಶಿಯವರಿಗೆ ಹೊಣೆ ಹೊತ್ತಿದ್ದೇನೆ ಎಂದರು.