Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬಿಜೆಪಿ ಲೀಡರ್ ಲೆಸ್ ಪಾರ್ಟಿ- ಶೆಟ್ಟರ್ ವಾಗ್ದಾಳಿ

ಗದಗ: ಬಿಜೆಪಿಯಲ್ಲಿ ನಾಯಕತ್ವ ಕೊರತೆ ಇದೆ, ಅದು ಲೀಡರ್ ಲೆಸ್ ಪಾರ್ಟಿ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮದುರ್ಗದಲ್ಲಿ ಹಣ ಇದ್ದ ವ್ಯಕ್ತಿಗೆ ಬಿಜೆಪಿ ಟಿಕೆಟ್​​ ಕೊಟ್ಟರು. ಬೈಂದೂರು ಸುಕುಮಾರ್ ಶೆಟ್ಟಿಗೆ ಟಿಕೆಟ್ ತಪ್ಪಿಸಿದರು. ಬಿಜೆಪಿಯ ಮಾಜಿ‌ ಶಾಸಕರು, ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಕಾಂಗ್ರೆಸ್ ಪಕ್ಷ ಸೇರಲು ಬಹಳಷ್ಟು ಜನ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಯಾರು ಸೇರುತ್ತಾರೆಂದು ಹೇಳಲ್ಲ, ನಿರ್ಧಾರವಾದಾಗ ಹೆಸರು ಹೇಳುತ್ತೇನೆ ಎಂದು ಹೇಳಿದ್ದಾರೆ.

40-45 ಶಾಸಕರು ಸಂಪರ್ಕದಲ್ಲಿದ್ದಾರೆಂದು ಬಿ.ಎಲ್.ಸಂತೋಷ್ ಹೇಳಿಕೆ ವಿಚಾರವಾಗಿ ಅವರು ಮಾತನಾಡಿ, ಈಗ ಬಿ.ಎಲ್​.ಸಂತೋಷ್ ಅವರೇ ಸ್ಪಷ್ಟೀಕರಣ ಕೊಡಬೇಕು.​ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆ ವಿಳಂಬ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಚೀಟಿ ಮೂಲಕವಾದರೂ ತಾತ್ಕಾಲಿಕ ವಿಪಕ್ಷ ನಾಯಕರ ಆಯ್ಕೆ ಮಾಡಿ ಎಂದು ಸಲಹೆ ನೀಡಿದರು.