ಬಿಸಿಯೂಟ ಮಾಡಿದ 60 ಮಕ್ಕಳು ಅಸ್ವಸ್ಥ!
ಚಿತ್ರದುರ್ಗ; ಮಧ್ಯಾಹ್ನದ ಬಿಸಿಯೂಟ ಸೇವಿಸಿ 60 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಬೀರಾವರನಲ್ಲಿ ನಡೆದಿದೆ.
ಅಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಸೇವಿಸಿದ ಬಳಿಕ ವಿದ್ಯಾರ್ಥಿಗಳಿಗೆ ವಾಂತಿಭೇದಿಯಾಗಿದೆ.
ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದರಿಂದ ಅವರನ್ನು ಸದ್ಯ ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ಬಂದಿದೆ.