Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬಿಹಾರ ಪತ್ರಕರ್ತನ ಮನೆಯಲ್ಲೇ ಗುಂಡಿಕ್ಕಿ ಹತ್ಯೆ – ಆರೋಪಿಗಳು ಬಿಹಾರ ಪೊಲೀಸರ ವಶಕ್ಕೆ

ಬಿಹಾರ: ಪತ್ರಕರ್ತರೊಬ್ಬರನ್ನು ಮನೆಯಲ್ಲೇ ಗುಂಡಿಕ್ಕಿ ಹತ್ಯೆಗೈದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಬಿಹಾರ ಪೊಲೀಸರು ತಿಳಿಸಿದ್ದಾರೆ.

ಮೃತ ಪತ್ರಕರ್ತನನ್ನು ವಿಮಲ್ ಯಾದವ್ ಎಂದು ಗುರುತಿಸಲಾಗಿದೆ.

ವಿಮಲ್ ಯಾದವ್ ಅವರ ರಾಣಿಗಂಜ್‌ನಲ್ಲಿರುವ ನಿವಾಸಕ್ಕೆ ಆಗಮಿಸಿದ ನಾಲ್ವರು ಬಂದು ಗುಂಡು ಹಾರಿಸಿ ಶುಕ್ರವಾರ ಹತ್ಯೆಗೈದಿದ್ದರು.

ಇನ್ನು ಬಿಮಲ್ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದ್ದು, ಎಫ್‌ಐಆರ್‌ನಲ್ಲಿ ಎಂಟು ಮಂದಿ ಕೊಲೆ ಆರೋಪಿಗಳನ್ನು ಹೆಸರಿಸಲಾಗಿದ್ದು, ಈ ಪೈಕಿ ನಾಲ್ವರನ್ನು ಇಂದು ಮುಂಜಾನೆ ವಿಚಾರಣೆಗೊಳಪಡಿಸಲಾಗಿದೆ. ಆರೋಪಿಗಳು 2019 ರಲ್ಲಿ ವಿಮಲ್ ಯಾದವ್ ಅವರ ಸಹೋದರನನ್ನು ಸಹ ಕೊಲೆ ಮಾಡಿದ್ದರು. ಆ ಪ್ರಕರಣದಲ್ಲಿ ಬಿಮಲ್ ಏಕೈಕ ಸಾಕ್ಷಿಯಾಗಿದ್ದರು ಮತ್ತು ಅವರ ಸಾಕ್ಷ್ಯವನ್ನು ನಾಶಪಡಿಸಲು ಈ ಹತ್ಯೆ ನಡೆಸಿದರೇ ಎಂಬುದು ತನಿಖೆ ಬಳಿಕ ಗೊತ್ತಾಗಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.