Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬೀದಿನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ

 

ಹೊಸಪೇಟೆ: ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ರಾಷ್ಟಿçÃಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಅಥವಾ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಸಾಂಗ್ ಮತ್ತು ಡ್ರಾಮಾ ಡಿವಿಜನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೊಂದಾಣಿಯಾಗಿರುವ ಕಲಾ ತಂಡಗಳಿAದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅವರು ತಿಳಿಸಿದ್ದಾರೆ.

ಕಲಾತಂಡಗಳಲ್ಲಿ ಕನಿಷ್ಠ 6ರಿಂದ 8 ಜನ ಕಲಾವಿದರು ಇರಬೇಕು, 2 ಮಹಿಳಾ ಕಲಾವಿದರು ಇರಬೇಕು, ಕಲಾತಂಡದವರು ವಿಜಯನಗರ ಜಿಲ್ಲೆಯವರಾಗಿರಬೇಕು, ಸಂಗೀತ ಸಲಕರಣಿಗಳನ್ನು ಹಾಗೂ ಸಮವಸ್ತç ಹೊಂದಿರಬೇಕು, ಜಿಲ್ಲೆಗೆ ಒಟ್ಟು 5 ಕಲಾ ತಂಡಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಅರ್ಹ ಬೀದಿನಾಟಕ ಕಲಾತಂಡಗಳು ತಮ್ಮ ತಂಡದ ಸಂಪೂರ್ಣ ವಿವರ, ಕಲಾವಿದರ ವಿವರ, ಅನುಭವ ದಾಖಲೆಗಳ ಸಹಿತ ಅರ್ಜಿಯನ್ನು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಸೆ.22ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಕಲಾ ತಂಡಗಳಿಗೆ ಸೆ.26ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ಆವರಣದಲ್ಲಿ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗುತ್ತದೆ, ಅರ್ಜಿ ಸಲ್ಲಿಸಿದ ಕಲಾತಂಡಗಳು ಸ್ವಂತ ಖರ್ಚಿನಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಹಾಗೂ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಲ್ಲಿ 5 ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ