ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ – ಡಿಕೆಶಿಯಿಂದ ಸ್ವಾಗತ
ಬೆಂಗಳೂರು: ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ವಾಗತಿಸಿದ್ದಾರೆ.
ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ & ಟೆಕ್ನಾಲಜಿ ಸೆಂಟರ್ ನ ಉದ್ಘಾಟನೆ ಹಾಗೂ ಬೋಯಿಂಗ್ ಸುಕನ್ಯಾ ಲೋಕಾರ್ಪಣೆ ಮಾಡಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಈ ವೇಳೆ ಸಚಿವರಾದ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಸೇರಿದಂತೆ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸೇರಿದಂತೆ ಬಿಜೆಪಿ ನಾಯಕರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.