ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ 500 ಕೋಟಿ ರೂ. ವೆಚ್ಚದ ವೈದ್ಯಕೀಯ ಕಾಲೇಜು
ಬೆಂಗಳೂರು : ಬಿಬಿಎಂಪಿ ಯ ವತಿಯಿಂದ ಬೆಂಗಳೂರಿನ ವಿಜಯನಗರದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಮುಂದಾಗಿದೆ.
ಬಿಬಿಎಂಪಿ ವತಿಯಿಂದ ಸುಮಾರು 10,000 ರೂ.ಗಳಿಂದ 12,000 ಕೋಟಿ ರೂ. ಮೊತ್ತದ ಬಜೆಟ್ ಮಂಡನೆ ಮಾಡಲಿದೆ. ಹಾಲಿ 2024-25ನೇ ಸಾಲಿನ ಬಿಬಿಎಂಪಿ ಬಜೆಟ್‌ನಲ್ಲಿ ಹೊಸದಾಗಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ.
ಬಿಬಿಎಂಪಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದ್ದು, ಇದು ಸಂಪೂರ್ಣವಾಗಿ ಪಾಲಿಕೆ ಒಡೆತನದಲ್ಲಿಯೇ ಕಾರ್ಯ ನಿರ್ವಹಿಸಲಿದೆ.
ಈ ಬಾರಿ ಬಿಬಿಎಂಪಿ ಬಜೆಟ್ ನಲ್ಲಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಇದುವರೆಗೆ ಶಾಲೆ, ಕಾಲೇಜುಗಳನ್ನು ನಡೆಸಲಾಗುತ್ತಿತ್ತು. ಈ ಬಾರಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಮುಂದಾಗಿದ್ದು, ವೈದ್ಯಕೀಯ ಶಿಕ್ಷಣವನ್ನೂ ನೀಡಲು ಮುಂದಾಗಿದೆ.
ಪಾಲಿಕೆಯಿಂದ 500 ಕೋಟಿ ಅನುದಾನ ವೈದ್ಯಕೀಯ ಮಹಾವಿದ್ಯಾಲಯ ನಿರ್ಮಾಣಕ್ಕೆ ಈ ಬಾರಿಯ ಬಜೆಟ್ ನಲ್ಲಿ ಕೇಳಿದೆ. ಬಡ ಮಕ್ಕಳ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಪಾಲಿಕೆಯಿಂದ ನೂತನ ಮೆಡಿಕಲ್ ಕಾಲೇಜು ನಿರ್ಮಿಸಲಾಗುತ್ತಿದೆ ಎಂದು ಹೇಳಿಕೊಂಡಿದೆ. ಬಜೆಟ್ ನಲ್ಲಿ ಇರುವಂತೆ ಅನುದಾನ ನೀಡಿದರೆ ಮುಂದಿನ ವರ್ಷ ಬಿಬಿಎಂಪಿಯಿಂದ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಾಗಲಿದೆ