Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ – 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆ

ಬೆಂಗಳೂರು: ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಏರ್​​ಪೋರ್ಟ್​​ನ ಟರ್ಮಿನಲ್ 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಇಂದು ಚಾಲನೆ ನೀಡಲಾಯಿತು.

ಹೈಟೆಕ್ ಬಸ್ ನಿಲ್ದಾಣವನ್ನು ಹಸಿರು ಬಾವುಟ ತೋರಿಸುವ ಮೂಲಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪನವರು‌ ಕೆಎಸ್‍ಆರ್ ಟಿಸಿ ಮತ್ತು ಬಿಎಂಟಿಸಿ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು.

ಈ ನಿಲ್ದಾಣದಲ್ಲಿ ವಿಐಪಿ ಲಾಂಜ್, ಎಸಿ ಲಾಂಜ್, ಶೌಚಾಲಯ, ಸಹಾಯವಾಣಿ ಕೇಂದ್ರ ಸೇರಿದಂತೆ ಅತ್ಯಾಧುನಿಕ ಸೌಲಭ್ಯ ಹೊಂದಿದ್ದು, ವಿಮಾನ ನಿಲ್ದಾಣದಿಂದ ಪ್ರತಿನಿತ್ಯ ಬೆಂಗಳೂರಿನ ವಿವಿದೆಡೆಗೆ ಬಿಎಂಟಿಸಿ ಮತ್ತು ವಾಯು ವಜ್ರ ಬಸ್​ಗಳು ಸಂಚರಿಸಲಿವೆ. ಜೊತೆಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಸ್ ಸೇವೆಗಳನ್ನು ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಇನ್ನು ಈಗಾಗಲೇ ಕೆಂಪೇಗೌಡ ಏರ್​​ಪೋರ್ಟ್​​ನ ಟರ್ಮಿನಲ್ 1 ರಲ್ಲಿ ಸುಸಜ್ಜಿತ ಬಸ್ ನಿಲ್ದಾಣವಿದ್ದು, ಟರ್ಮಿನಲ್ 2 ರಲ್ಲಿ ನಿಲ್ದಾಣ ಇರಲಿಲ್ಲ. ಹೀಗಾಗಿ ಪ್ರಯಾಣಿಕರು ಟರ್ಮಿನಲ್ 2 ರಿಂದ ಟರ್ಮಿನಲ್ 1 ಗೆ ಬೇರೆ ಬಸ್ ಮೂಲಕ ಆಗಮಿಸಿ ನಂತರ ವಾಯುವಜ್ರ ಬಸ್ ಏರಬೇಕಿತ್ತು. ಆದರೆ ಈಗ ಟರ್ಮಿನಲ್ 2 ರಲ್ಲೇ ಸುಸಜ್ಜಿತ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣವಾಗಿದ್ದು, ಇದು ಸಾವಿರಾರು ಜನ ಪ್ರಯಾಣಿಕರಿಗೆ ಅನುಕೂಲವಾಗಲಿದೆ.