Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬೆಂಗಳೂರು ರಾಮನಗರದಲ್ಲಿ ಅರಣ್ಯ ಇಲಾಖೆ ಕಾರ್ಯಚರಣೆ : ಆನೆದಂತ ಗಳೊಂದಿಗೆ 8 ಆರೋಪಿಗಳ ಬಂಧನ..!

ಬೆಂಗಳೂರು: ರಾಮನಗರ ಜಿಲ್ಲೆಯ ಕೋಡಿಹಳ್ಳಿ ಹುಣಸನಹಳ್ಳಿ ವ್ಯಾಪ್ತಿಯಲ್ಲಿ ಆನೆ ದಂತ ಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ 8 ಮಂದಿ ಆರೋಪಿಗಳನ್ನು ಅರಣ್ಯ ಇಲಾಖೆಯ ಸಂಚಾರ ದಳ ಬಂಧಿಸಿದೆ.

ಐಯ್ಯನ್‍ಕುಟ್ಟಿ (53), ರತ್ನ(46), ಕೃಷ್ಣಮೂರ್ತಿ ಗೋಪಾಲ್(35), ನಾರಾಯಣಸ್ವಾಮಿ(50), ದಿನೇಶ್(42), ರವಿ(44), ಮನೋಹರ್ ಪಾಂಡೆ(61), ವೆಂಕಟೇಶ್(51) ರನ್ನು ಬಂಧಿತ ಆರೋಪಿಗಳಾಗಿದ್ದಾರೆ.

ವನ್ಯಜೀವಿ(ಸಂರಕ್ಷಣಾ) ಕಾಯ್ದೆ ಉಲ್ಲಂಘನೆ ಮಾಡಿ ಅಕ್ರಮವಾಗಿ ಆನೆದಂತ ಮಾರಾಟ ಯತ್ನ ನಡೆಯುವ ಬಗ್ಗೆ ಮಾಹಿತಿ ದೊರೆತ ಮೇರೆಗೆ ಬೆಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯಾಧಿಕಾರಿಗಳು, ಅಪರಾಧ ನಿಯಂತ್ರಣ ದಳದ ಸಿಬ್ಬಂದಿ ಹುಣಸನಹಳ್ಳಿ-ಕನಕಪುರ ರಸ್ತೆಯ ಮರಿದೇವರದೊಡ್ಡಿ ಕ್ರಾಸ್ ಬಳಿ ವಾಹನಗಳ ತಪಾಸಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

ಆರೋಪಿಗಳಿಂದ ಆನೆ ದಂತದ ತುಂಡುಗಳು ಹಾಗೂ ಕೃತ್ಯದಲ್ಲಿ ಉಪಯೋಗಿಸಿದ್ದ ಬಿಳಿ ಬಣ್ಣದ ಮಹೀಂದ್ರ ಜೈಲೋ ಕಾರನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.