Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬೆಳ್ತಂಗಡಿ: ಟಿಪ್ಪರ್‌ ಢಿಕ್ಕಿಯಾಗಿ 7 ವಾಹನಗಳು ಜಖಂ, ವಿದ್ಯಾರ್ಥಿನಿ ಗಂಭೀರ

ಬೆಳ್ತಂಗಡಿ: ಟಿಪ್ಪರ್ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಎರಡು ಬಸ್ , ನಾಲ್ಕು ಕಾರುಗಳು, ಒಂದು ಆಟೋ ರಿಕ್ಷಾ ಮತ್ತು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಭಾರತ್ ಶೋರೂಂ ಬಳಿ ನಡೆದಿದೆ.

ಬಳಂಜ ಗ್ರಾಮದ ಗುಂಡೇರಿ ನಿವಾಸಿ ವೀಕ್ಷಾ (17) ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿನಿ.  ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಜಿರೆಯಿಂದ ಗುರುವಾಯನಕೆರೆ ಕಡೆಗೆ ಟಿಪ್ಪರ್ ಹೋಗುತ್ತಿದ್ದ ಟಿಪ್ಪರ್‌ ಮುಂದೆ ಸಂಚಾರಿಸುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ. ನಂತರ ಇನ್ನೊಂದು ಬಸ್ಸಿನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಎರಡನೆ ಬಾರಿ ಡಿಕ್ಕಿ ಹೊಡೆದ ರಭಸಕ್ಕೆ ಟಿಪ್ಪರ್ ಏಕಾಏಕಿ ಶೋರೂಂ ಕಡೆಗೆ ತಿರುಗಿ ರಸ್ತೆಯಲ್ಲಿ ಹೋಗುತ್ತಿದ್ದ ವೀಕ್ಷಾ ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದು ಶೋರೂಂ ಎದುರು ನಿಲ್ಲಿಸಿದ್ದ ನಾಲ್ಕು ಕಾರು ಹಾಗೂ ಆಟೋ ರಿಕ್ಷಾ ಜಖಂಗೊಂಡಿದೆ.

ನೇಪಾಳ ಪ್ರಧಾನಿ ಪುಷ್ಪಾ ಕಮಲ್ ದಹಲ್ ಪತ್ನಿ ಸೀತಾ ದಹಲ್ ನಿಧನ

ವೀಕ್ಷಾ ವೀಕ್ಷಾ ಲಾಯಿಲಾದಲ್ಲಿ ಕಂಪ್ಯೂಟರ್ ತರಬೇತಿ ತರಗತಿಗೆ ಸೇರಿದ್ದು ತನ್ನ ಸ್ನೇಹಿತೆಯೊಂದಿಗೆ ತರಗತಿಗೆ ಹಾಜರಾಗಲು ನಡೆದುಕೊಂಡು ಹೋಗುತ್ತಿದ್ದಳು. ವೇಣೂರು ಸರಕಾರಿ ಕಾಲೇಜಿನಲ್ಲಿ ಪಿಯು ಓದಿದ್ದಳು. ಮತ್ತೋರ್ವ ಬಾಲಕಿ ಟಿಪ್ಪರ್‌ನ ಚಕ್ರದಡಿ ಸಿಲುಕಿ ಕೂದಲೆಳೆಯಂತರದಲ್ಲಿ ಪಾರಾಗಿದ್ದಾಳೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದೀಗ ಟಿಪ್ಪರ್ ಚಾಲಕ ಸುರೇಶ್ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.