Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಕಾರು- ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಕನ್ಯಾಡಿಯಲ್ಲಿ ನಡೆದಿದೆ.

ಬೆಳ್ತಂಗಡಿಯ ದೇವಸ್ಥಾನವೊಂದರ ಸಹ ಅರ್ಚಕ ಅಮೇಯ ಭಟ್‌ ಅವರ ಪತ್ನಿ ಶ್ರೀರಕ್ಷಾ ಕಿಣಿ (22) ಅಪಘಾತಕ್ಕೀಡಾದವರು.

ಅಮೇಯ ಭಟ್‌ ಅವರು ತನ್ನ ತಾಯಿ ಮನೆ ಕನ್ಯಾಡಿಗೆ ತೆರಳಿದ್ದು, ಅಲ್ಲಿಂದ ಹಿಂದಿರುಗಿ ಬೆಳ್ತಂಗಡಿಗೆ ಬರುತ್ತಿದ್ದ ವೇಳೆ ಉಜಿರೆ ಕಡೆಯಿಂದ ಬರುತ್ತಿದ್ದ ರಮೇಶ್‌ ಎಂಬಾತ ಚಲಾಯಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಹಾಗೂ ಹತ್ಯಡ್ಕದ ಸತೀಶ್‌ ಶೆಟ್ಟಿ ಅವರು ಚಲಾಯಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಇನ್ನು ಢಿಕ್ಕಿಯ ರಭಸಕ್ಕೆ ಸ್ಕೂಟರ್‌ ಇಬ್ಭಾಗವಾಗಿ ಸಂಪೂರ್ಣ ಜಖಂಗೊಂಡು ಸವಾರೆ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆ ದೊಯ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಧಾನಿ ಮೋದಿ ನಿವಾಸದ ಮೇಲೆ ಕಾಣಿಸಿಕೊಂಡ ಡ್ರೋಣ್; ಪೊಲೀಸರಿಂದ ತನಿಖೆ

ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಸತೀಶ್‌ ಶೆಟ್ಟಿಯವರು ದೂರು ದಾಖಲಿಸಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪಘಾತ ಎಸಗಿದ ಕಾರು ಬೆಂಗಳೂರು ನೋಂದಣಿ ಹೊಂದಿದ್ದು, ಲೋಕೋಪಯೋಗಿ ಇಲಾಖೆಗೆ ಸೇರಿದ್ದಾಗಿದೆ. ಆದರೆ ಕಾರಿನಲ್ಲಿ ಇಲಾಖೆಯ ಅಧಿಕಾರಿಗಳು ಯಾರೂ ಇರಲಿಲ್ಲ. ಚಾಲಕ ಮತ್ತು ಇನ್ನೋರ್ವ ವ್ಯಕ್ತಿ ಮಾತ್ರ ಇದ್ದರು ಎಂದು ವರದಿಯಾಗಿದೆ.