ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರೊಂದಿಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. 13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನ 3 ಕಡೆ ಸೇರಿ ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿಯೂ ದಾಳಿ ನಡೆಸಲಾಗಿದೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.