Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿಯಾಗಲು ದಕ್ಷಿಣ ಆಫ್ರಿಕಾಕ್ಕೆ ತೆರಳಿದ ಪ್ರಧಾನಿ ಮೋದಿ

15 ನೇ ಬ್ರಿಕ್ಸ್ ಶೃಂಗಸಭೆ ಯಲ್ಲಿ ಭಾಗವಹಿಸಲು  ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ಗೆ ತೆರಳಿದ್ದಾರೆ.

ಬ್ರಿಕ್ಸ್‌ನ ಈ ಸಭೆಯಲ್ಲಿ ಹಲವು ದೇಶಗಳ ಮುಖ್ಯಸ್ಥರು ಪ್ರಧಾನಿ ಮೋದಿಯವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಯುವ ಸಾಧ್ಯತೆ ಇದೆ. ಅಲ್ಲದೇ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ಪ್ರಧಾನಿ ಮೋದಿ ಅವರು ಜೋಹಾನ್ಸ್‌ಬರ್ಗ್‌ನಲ್ಲಿ ಮುಖಾಮುಖಿಯಾಗಲಿದ್ದಾರೆ.

ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರ ಆಹ್ವಾನದ ಮೇರೆಗೆ ನಾನು 22-24 ಆಗಸ್ಟ್ 2023 ರವರೆಗೆ ದಕ್ಷಿಣ ಆಫ್ರಿಕಾದ ಗಣರಾಜ್ಯಕ್ಕೆ ಭೇಟಿ ನೀಡುತ್ತಿದ್ದೇನೆ.ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿರುವ 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಜೋಹಾನ್ಸ್‌ಬರ್ಗ್‌ನಲ್ಲಿರುವ ಕೆಲವು ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲು ನಾನು ಎದುರು ನೋಡುತ್ತಿದ್ದೇನೆ. ಗ್ರೀಕ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೋಟಾಕಿಸ್ ಅವರ ಆಹ್ವಾನದ ಮೇರೆಗೆ ನಾನು ದಕ್ಷಿಣ ಆಫ್ರಿಕಾದಿಂದ ಗ್ರೀಸ್‌ನ ಅಥೆನ್ಸ್‌ಗೆ ಆಗಸ್ಟ್​ 25ರಂದು ರಂದು ಪ್ರಯಾಣಿಸುತ್ತೇನೆ ಎಂದು ಮೋದಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದು ನನ್ನ ಮೊದಲ ಭೇಟಿಯಾಗಿದೆ. 40 ವರ್ಷಗಳ ನಂತರ ಗ್ರೀಸ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಗೌರವ ನನಗಿದೆ ಎಂದಿದ್ದಾರೆ. ಕೊರೊನಾ ಅವಧಿಯ ನಂತರದ ಮೊದಲ ಸಭೆ ಇದಾಗಿದೆ.