ಬ್ರಿಟನ್ ರಾಜ 3ನೇ ಚಾರ್ಲ್ಸ್ ಗೆ ಕ್ಯಾನ್ಸರ್..!
ಬ್ರಿಟನ್ ರಾಜ 3ನೇ ಚಾರ್ಲ್ಸ್ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಬಕಿಂಗ್ ಹ್ಯಾಮ್ ಅರಮನೆ ವಕ್ತಾರರು , ಚಾರ್ಲ್ಸ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ.
ಹೀಗಾಗಿ ಅವರು ವೈದ್ಯರ ಸಲಹೆಯ ಮೇರೆಗೆ ಸಾರ್ವಜನಿಕವಾಗಿ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಆದರೆ ಖಾಸಗಿ ಸಭೆ ಸೇರಿದಂತೆ ಅಧಿಕೃತ ಕೆಲಸವನ್ನು ಮುಂದುವರಿಸುತ್ತಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.