ಬ್ರೇಕ್ ಫೇಲ್ ಆಗಿ ಶಾಲೆಗೆ ನುಗ್ಗಿದ ಕೆಎಸ್ ಆರ್ ಟಿಸಿ ಬಸ್ : ಒರ್ವ ಸಾವು, ಹಲವರಿಗೆ ಗಾಯ
ಹಾಸನ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿನ ಬ್ರೇಕ್ ಫೇಲ್ ಆಗಿ ಫೆ 4 ರಂದು ಶಾಲೆಯೊಂದಕ್ಕೆ ನುಗ್ಗಿದ ಪರಿಣಾಮ ಒರ್ವ ಪ್ರಯಾಣಿಕ ಸಾವನ್ನಪ್ಪಿ ಘಟನೆ ಹಾಸನ ಸಕಲೇಶಪುರ ತಾಲೂಕಿನ ಬಾಗೆ ಬಳಿ ನಡೆದಿದೆ.
ಕೆಎಸ್ ಆರ್ ಟಿಸಿ ಬಸ್ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುವಾಗ ಮಾರ್ಗಮಧ್ಯೆ ಬ್ರೇಕ್ ಫೇಲ್ ಆಗಿದೆ. ಇದ್ದರಿಂದಾಗಿ ಬಾಗೆ ಬಳಿ ಇರುವ ಶಾಲೆಯೊಂದಕ್ಕೆ ಬಸ್ ನುಗ್ಗಿದ ಪರಿಣಾಮ ಬಸ್ಸಿನ ಮುಂಭಾಗದ ಕಿಟಕಿ ಬಳಿ ಕುಳಿತ್ತಿದ್ದ ಪ್ರಯಾಣಿಕ ಸಾವನ್ನಪ್ಪಿದ್ದಾನೆ. ಘಟನೆಯ ಪರಿಣಾಮ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಇಂದು ಭಾನುವಾರವಾಗಿದ್ದರಿಂದ ಶಾಲೆಗೆ ರಜೆ ಇದ್ದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಆದರೆ ಅಪಘಾಡ ಸಂಭವಿಸಿದ ಪರಿಣಾಮ ಶಾಲೆಯ ಕಟ್ಟಡವು ಹಾನಿಯಾಗಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.