Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಭದ್ರಾ ನಾಲೆಗಳಲ್ಲಿನ ಅಕ್ರಮ ಪಂಪ್‍ಸೆಟ್‍ಗಳನ್ನು ತೆರವು:  ಜಿಲ್ಲಾಧಿಕಾರಿ ಸೂಚನೆ

 

ದಾವಣಗೆರೆ; ಮಳೆಯ ಕೊರತೆಯಿಂದಾಗಿ ಜಲಾಶಯದಲ್ಲಿ  ನೀರಿನ ಸಂಗ್ರಹ ಕಡಿಮೆ ಇರುವುದರಿಂದ ಮತ್ತು ನಾಲೆ ಮೂಲಕ ಅಚ್ಚುಕಟ್ಟುದಾರರ ಬೆಳೆಗಳಿಗೆ ನೀರು ಕೊಡಬೇಕಾಗಿರುವುದರಿಂದ ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್‍ಸೆಟ್‍ಳನ್ನು ತೆರವುಗೊಳಿಸಬೇಕೆಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಸೂಚನೆ ನೀಡಿದರು.

ಬುಧವಾರ ಜಿಲ್ಲಾಡಳಿತ ಭವನದ  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಭದ್ರಾ ಅಚ್ಚು ಕಟ್ಟು ಪ್ರದೇಶಗಳಿಗೆ ನೀರನ್ನು ಹರಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ನೀರಿನ ಅಭಾವ ಉಂಟಾಗಲಿದ್ದು, ಭದ್ರಾ ಅಚ್ಚುಕಟ್ಟು ಪ್ರದೇಶಗಳಿಗೆ ಆನ್ ಅಂಡ್ ಆಫ್ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಈಗಾಗಲೇ ಅಕ್ಟೋಬರ್ 26 ರಿಂದ ಭದ್ರಾ  ಎಡದಂಡೆಗೆ 380 ಕ್ಯೂಸೆಕ್ಸ್ ಹಾಗೂ ಭದ್ರಾ ಬಲದಂಡೆಗೆ 3100 ಕ್ಯೂಸೆಕ್ಸ್  ನೀರನ್ನು ಹರಿಸಲಾಗಿದೆ. ಬೆಸ್ಕಾಂ ಅಧಿಕಾರಿಗಳು ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್‍ಸೆಟ್‍ಗಳನ್ನು ತೆರವುಗೊಳಿಸಬೇಕು ಮತ್ತು ಅಂತಹ ಪಂಪ್‍ಸೆಟ್ ಗಳಿಗೆÉ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಎಂದರು.

ಭದ್ರಾ ಬಲದಂಡೆಯ ಭಾಗದಲ್ಲಿ ರೈತರ ಜಮೀನುಗಳಲ್ಲಿ ಭತ್ತವು ಒಡೆ ಕೀಳುತ್ತಿದ್ದು, ಈ ಸಂದರ್ಭದಲ್ಲಿ ಭತ್ತಕ್ಕೆ ನೀರಿನ ಅವಶ್ಯಕತೆ ಮುಖ್ಯವಾಗಿರುತ್ತದೆ. ಹಾಗಾಗಿ ನೀರಾವರಿ ನಿಗಮದ ಇಂಜಿನಿಯರ್‍ಗಳು ಸಕಾಲದಲ್ಲಿ ರೈತರಿಗೆ ನೀರನ್ನು ಒದಗಿಸಿ ಉತ್ತಮ ಫಸಲಿಗೆ ಸಹಕರಿಸಬೇಕು ಎಂದರು.

ದಾವಣಗೆರೆ ವಿಭಾಗದ ನಾಲೆಗಳಿಗೆ 7 ದಿನ ಹಾಗೂ ಮಲೆಬೆನ್ನೂರು ವಿಭಾಗದ ನಾಲೆಗಳಿಗೆ 6 ಮತ್ತು 3 ದಿನದಂತೆ ಆನ್ ಅಂಡ್ ಆಫ್ ಸಿಸ್ಟಮ್ ಅಳವಡಿಸಲಾಗಿದೆ. ಭದ್ರಾ ಅಚ್ಚುಕಟ್ಟು ಪ್ರದೇಶಗಳಲ್ಲಿನ  9ಬಿ ಹಾಗೂ 9ಸಿ ನಾಲೆಗಳಿಗೂ ಸಹ ನೀರು ಶೀಘ್ರವೇ ತಲುಪುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ  ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ. ಅಶ್ವಥ್ ಎಂ.ಬಿ, ಹರಿಹರ ತಹಶೀಲ್ದಾರ್ ಪೃಥ್ವಿ ಸಾನಿಕಂ, ಕಾರ್ಯ ನಿರ್ವಾಹಕ ಇಂಜೀನಿಯರ್ ಮಂಜುನಾಥ್ ಆರ್.ಬಿ ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.