Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಒಂದು ಪೈಸೆ ನೀಡಿಲ್ಲ.!: ಸಿಎಂ

 

 

ತುಮಕೂರು: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್ನಲ್ಲಿ ಘೋಷಿಸಿರುವ ₹5,300ಕೋಟಿ ಹಣದಲ್ಲಿ ಈವರೆಗೂ ಒಂದು ಪೈಸೆ ನೀಡಿಲ್ಲ. ತಕ್ಷಣ ಹಣ ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ಮಧುಗಿರಿಯಲ್ಲಿ ಬುಧವಾರ ಕ್ಷೀರ ಭಾಗ್ಯ ಯೋಜನೆ ದಶಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ‘ರಾಷ್ಟ್ರೀಯ ಯೋಜನೆ’ ಎಂದು ಕೇಂದ್ರ ಸರ್ಕಾರ ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ಎತ್ತಿನಹೊಳೆ ನೀರಾವರಿ ಯೋಜನೆಗೆ ಹಿಂದಿನ ಬಿಜೆಪಿ ಸರ್ಕಾರ ಹಣ ಕೊಡದೆ ಕಾಮಗಾರಿ ನಿಧಾನವಾಗಿತ್ತು. ಇದರಿಂದ ಯೋಜನೆ ಮೊತ್ತ ₹23ಸಾವಿರ ಕೋಟಿಗೆ ಏರಿಕೆಯಾಗಿದೆ. ಈಗ ಹಣ ನೀಡುತ್ತಿದ್ದು, ನನ್ನ ಅವಧಿಯಲ್ಲೇ ಪೂರ್ಣಗೊಳಿಸಲಾಗುವುದು ಎಂದರು.