Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾರೂ ಕೂಡ ಹೆದರಿಸಲು ಸಾಧ್ಯವಿಲ್ಲ’- ಪುಟಿನ್‌

ಮಾಸ್ಕೋ: ಭಾರತೀಯರ ಹಿತಾಸಕ್ತಿಗೆ ಧಕ್ಕೆ ತರಬಲ್ಲ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಯಾರೂ ಕೂಡ ಹೆದರಿಸಲು ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೇಳಿದ್ದಾರೆ.

ರಷ್ಯಾ ಕಾಲಿಂಗ್ ಹೂಡಿಕೆ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಕುರಿತು ಮಾತನಾಡುತ್ತಾ, ‘ಮೋದಿಯವರನ್ನು ಯಾರೂ ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧ ನಿರ್ಧಾರ ತೆಗೆದುಕೊಳ್ಳುವಂತೆ ಬಲವಂತಪಡಿಸಬಹುದು, ಅಂಥ ಒತ್ತಡವನ್ನು ಅವರು ಅನುಭವಿಸಬಹುದು ಎಂದು ಊಹಿಸಲು ಸಾಧ್ಯವಿಲ್ಲ. ನಾನು ಸದಾ ಗಮನಿಸುತ್ತಿರುತ್ತೇನೆ, ಭಾರತೀಯ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸುವ ಅವರ ಕಠಿಣ ನಿಲುವು ನನಗೆ ಆಶ್ಚರ್ಯಕರವಾಗಿದೆ ಎಂದು ತಿಳಿಸಿದರು.

ಸ್ವೇಹರಹಿತ ದೇಶಗಳ ಬಾಹ್ಯ ಒತ್ತಡದ ನಡುವೆಯೂ ಪ್ರಧಾನಿ ನರೇಂದ್ರ ಮೋದಿಯವರ ದೃಢವಾದ ನಾಯಕತ್ವ ಭಾರತಕ್ಕೆ ದೊರೆತಿದೆ ಎಂದು ಶ್ಲಾಘಿಸಿದ್ದಾರೆ.
ಭಾರತ- ರಷ್ಯಾ ಬಾಂಧವ್ಯವು ಎಲ್ಲಾ ರಂಗಗಳಲ್ಲಿ ಪ್ರಗತಿಯಲ್ಲಿದೆ. ಉಭಯ ದೇಶಗಳ ನಡುವಿನ ಸಂಬಂಧಗಳು ಎಲ್ಲಾ ಪಥಗಳಲ್ಲಿ ಪ್ರಗತಿಪರವಾಗಿ ಅಭಿವೃದ್ಧಿ ಹೊಂದುತ್ತಿವೆ. ಇದರ ಮುಖ್ಯ ಭರವಸೆ ಪ್ರಧಾನಿ ಮೋದಿ ಅವರು ಅನುಸರಿಸುತ್ತಿರುವ ನೀತಿಯಾಗಿದೆ ಎಂದು ಪುಟಿನ್ ಶ್ಲಾಘಿಸಿದ್ದಾರೆ

ಎರಡು ದಿನಗಳ ʼಮಾಸ್ಕೋ ಕಾಲಿಂಗ್‌ʼ ಇವೆಂಟ್‌ನಲ್ಲಿ ಚೀನಾ, ಭಾರತ, ಟರ್ಕಿ, ಗಲ್ಫ್ ದೇಶಗಳು, ಮಧ್ಯಪ್ರಾಚ್ಯ, ಆಫ್ರಿಕಾ ಮತ್ತು ಏಷ್ಯಾದ ಪ್ರತಿನಿಧಿಗಳು ಭಾಗವಹಿಸಿದ್ದಾರೆ.