ಭಾರತ ಮಾತೆ ಅಂದ್ರೆ ಯಾರು? – ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾದ ರಾಹುಲ್ ಗಾಂಧಿ ಮಾತು
ತಮ್ಮ ಮಾತಿನಿಂದ ಒಂದಿಲ್ಲೊಂದು ಎಡವಟ್ಟು ಮಾಡಿಕೊಳ್ಳುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಮತ್ತೊಂದು ಚರ್ಚೆಗೆ ಕಾರಣರಾಗಿದ್ದಾರೆ. ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಗಾಗಿ ಭಾರಿ ಸಮಾವೇಶ ನಡೆಸುತ್ತಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ರಾಜಸ್ಥಾನದ ಬುಂದಿಯಲ್ಲಿ ಕೈಗೊಂಡಿದ್ದ ಭಾರಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಹೇಳಿರುವ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದೆ. ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡುವ ವೇಳೆ ಎಲ್ಲರೂ ಭಾರತ ಮಾತಾ ಜೈ ಅಂತಾ ಹೇಳ್ತಾರೆ. ಈ ಭಾರತ ಮಾತೆ ಅಂದರೆ ಯಾರು ಎಂದು ಪ್ರಶ್ನಿಸುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ರಾಹುಲ್ ಗಾಂಧಿ ಬಿರುಗಾಳಿ ಎಬ್ಬಿಸಿದ್ದಾರೆ. ಇನ್ನು, ಪ್ರಧಾನಿ ಮೋದಿ ಭಾರತ ಮಾತಾ ಕಿ ಜೈ ಎನ್ನುವ ಬದಲಿಗೆ ‘ಅದಾನಿ ಜೀ ಕಿ ಜೈ’ ಎಂದು ಹೇಳುತ್ತಾರೆ. ಏಕೆಂದರೆ ಅವರು ಅದಾನಿ ಪರವಾಗಿ ಕೆಲಸ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.