Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಂಜು ಮುಸುಕಿದ ವಾತಾವರಣ: ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ..!

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದ ಪರಿಣಾಮ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ. ಚಾರ್ಮಾಡಿ ಬಿದಿರುತಳ ಬಸ್‌ ನಿಲ್ದಾಣದ ಸಮೀಪ ಮಂಗಳೂರಿಗೆ ಸಾಗುತ್ತಿದ್ದ ಜೀಪೊಂದು ಮಂಜು ಕವಿದ ಕಾರಣ ದಾರಿ ಕಾಣದೇ ತಡೆಗೋಡೆಗೆ ಹತ್ತಿ ಪಲ್ಟಿಯಾಗಿದ್ದು ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇನ್ನೊಂದು ಅಪಘಾತ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಸ್ವಲ್ಪ ಮುಂದೆ ಕಿರಿದಾದ ದಾರಿಯಲ್ಲಿ ಸಂಭವಿಸಿದೆ. ಮಂಜು ಮುಸುಕಿದ್ದರಿಂದ ದಾರಿ ಕಾಣದೇ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್ ಧರ್ಮಸ್ಥಳದಿಂದ ಧಾರವಾಡಕ್ಕೆ ಸಾಗುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿ ತಡೆಗೋಡೆ ಕುಸಿದಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.