ಮಡಿಕೇರಿ:ನೇಣಿಗೆ ಕೊರಳೊಡ್ಡಿ ಗೃಹಿಣಿ ಜೀವಾಂತ್ಯ..!
ಮಡಿಕೇರಿ : ಗೃಹಿಣಿಯೊಬ್ಬಳು ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನ ನಾಪೋಕ್ಲು ಬಳಿಯ ನೆಲಜಿ ಗ್ರಾಮದಲ್ಲಿ ನಡೆದಿದೆ.
ನೆಲೆಜಿ ಗ್ರಾಮದ ನಿವಾಸಿ ಮುಂಡಂಡ ಪ್ರಭು ಪೆಮ್ಮಯ್ಯ ಅವರ ಪತ್ನಿ ಡೀನಾ ಪೆಮ್ಮಯ್ಯ (27) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದಾರೆ. ತನ್ನ 9 ವರ್ಷದ ಹೆಣ್ಣು ಮಗುವನ್ನು ತನ್ನ ತವರು ಮನೆಯಲ್ಲಿ ಬಿಟ್ಟು ನೆಲಜಿ ಗ್ರಾಮದಲ್ಲಿರುವ ಗಂಡನ ಮನೆಯಲ್ಲಿ ಯಾರು ಇಲ್ಲದ ಸಮಯ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪೋಲೀಸರ ಪರಿಶೀಲನೆ ವೇಳೆ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆಯಲಾಗಿದೆ. ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಕ್ರೈಂ ಪಿಎಸ್ಐ ಶ್ರೀಧರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಡೀನಾ ಪೆಮ್ಮಯ್ಯ ಅವರ ತಂದೆ ಪೂಣಚ್ಚ ಅವರು ನೀಡಿದ ದೂರಿನ ಅನ್ವಯ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.