Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಣಿಪುರದಲ್ಲಿ ಮತ್ತೆ ಹಿಂಸಾಚಾರ- ಮನೆಗಳಿಗೆ ಬೆಂಕಿ

ಇಂಫಾಲ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ. ಇಂಫಾಲದ ಪಶ್ಚಿಮ ಜಿಲ್ಲೆಯಲ್ಲಿ ಹಲವು ಸುತ್ತುಗಳ ಗುಂಡುಗಳನ್ನು ಹಾರಿಸಲಾಗಿದ್ದು, 2 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ರಾತ್ರಿ 10 ಗಂಟೆ ಪಟ್ಸೋಯಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಕೀಥೆಲ್ಮನ್ಬಿಯಲ್ಲಿ ಘಟನೆ ಸಂಭವಿಸಿದೆ. ದಾಳಿಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಆ ಪ್ರದೇಶದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸದ್ಯ ಭದ್ರತಾ ಪಡೆಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ಬರುವದರಲ್ಲಿ ಯಶ್ವಸ್ಸಿಯಾಗಿದ್ದಾರೆ. . ಘಟನೆ ಬಳಿಕ ಪ್ರದೇಶದಲ್ಲಿ ಜಮಾಯಿಸಿದ ಮೈಟೆ ಮಹಿಳೆಯರ ಗುಂಪನ್ನು ಭದ್ರತಾ ಪಡೆಗಳು ಮುಂದೆ ಸಾಗದಂತೆ ತಡೆದಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಭದ್ರತೆಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾಗಿದ್ದು, ಅಂದಿನಿಂದ ಹಿಂಸಾಚಾರದಲ್ಲಿ 180 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ.