Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಮತ್ತೊಮ್ಮೆ ಮೋದಿಜೀ ಪ್ರಧಾನಿ ಎಂಬುದು ಜನಸಾಮಾನ್ಯರ ಸಂಕಲ್ಪ’ – ವಿಜಯೇಂದ್ರ

ಬೆಂಗಳೂರು: ಮತ್ತೊಮ್ಮೆ ನರೇಂದ್ರ ಮೋದಿಜೀ ಪ್ರಧಾನಿ ಎಂಬುದು ಜನಸಾಮಾನ್ಯರ ಸಂಕಲ್ಪ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಬೀದರ್ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಇಂದು ಆಯೋಜಿಸಿದ್ದ ಬೃಹತ್ ಬೈಕ್ ರ್ಯಾಲಿ ಮೂಲಕ ತೆರಳಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಭಾರತ ಇಂದು ಬಲಿಷ್ಠವಾಗಿ ಬೆಳೆದು ನಿಲ್ಲಲು ಕಾರಣರಾಗಿರುವ ನಮ್ಮ ನೆಚ್ಚಿನ ಶ್ರಮಿಕ ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ದೇಶದ ಜನತೆ ಸಂಕಲ್ಪ ತೊಟ್ಟಿದ್ದಾರೆ. 2024 ರಾಮರಾಜ್ಯ ನಿರ್ಮಾಣದ ಚುನಾವಣೆಯಾಗಿದ್ದು, ಮೋದಿ ಜೀ ಅವರ ಜನಪರ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸಿ ಬಿಜೆಪಿ ಗೆಲ್ಲಿಸಲು ಕಾರ್ಯಕರ್ತರು ಹಗಲಿರುಳೆನ್ನದೇ ಶ್ರಮಿಸಬೇಕೆಂಬ ಕರೆ ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರದ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ ಖೂಬಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಶೈಲೇಂದ್ರ ಬೆಲ್ದಾಳೆ, ಶಾಸಕರಾದ ಪ್ರಭು ಚೌಹಾಣ್, ಶರಣು ಸಲಗಾರ್, ವಿಧಾನ ಪರಿಷತ್ ಸದಸ್ಯ ರಘುನಾಥ ಮಲ್ಕಾಪುರೆ, ನೂತನ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳ್ಕರ್ ಅವರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.