ಮದ್ಯಪ್ರಿಯರಿಗೆ ಶಾಕ್ – ಪ್ರೇಮಿಗಳ ದಿನದಂದುಮದ್ಯ ಮಾರಾಟಕ್ಕೆ ನಿಷೇಧ..!
ಬೆಂಗಳೂರು: ಪ್ರೇಮಿಗಳ ದಿನದಂದು ಮದ್ಯಪ್ರಿಯರಿಗೆ ಶಾಕಿಂಗ್ ಸುದ್ದಿ, ಪ್ರೇಮಿಗಳ ದಿನದಂದು ಬೆಂಗಳೂರಿನಲ್ಲಿ ಮದ್ಯ ಸಿಗಲ್ವಂತೆ. ಹೌದು, ಫೆಬ್ರವರಿ 14ರ ಸಂಜೆ 5ರಿಂದ ಫೆಬ್ರವರಿ 17ರ ಬೆಳಿಗ್ಗೆ 6 ಗಂಟೆವರೆಗೆ ನಗರದ ಕೆಲವು ಭಾಗಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆಬ್ರವರಿ 16 ರಂದು ವಿಧಾನ ಪರಿಷತ್ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ವ್ಯಾಲೆಂಟೈನ್ಸ್ ಡೇ ದೇಶಾದ್ಯಂತ ವಿಶೇಷವಾಗಿ ಆಚರಿಸಲಾಗುತ್ತದೆ. ಅದರಲ್ಲೂ ಬೆಂಗಳೂರಿನಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲು ಯುವ ಜನತೆ ಸಿದ್ಧರಾಗಿದ್ದಾರೆ. ರೆಸ್ಟೋರೆಂಟ್ಗಳು, ಪಬ್ಗಳು ಮತ್ತು ಬಾರ್ಗಳಲ್ಲಿ ವಿಶೇಷ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ, ಪ್ರೇಮಿಗಳ ದಿನದಂದೇ ಮದ್ಯ ಮಾರಾಟ ನಿಷೇಧಿಸಿದ್ದು, ಮದ್ಯ ಪ್ರಿಯ ಪ್ರೇಮಿಗಳಿಗೆ ನಿರಾಸೆ ಮೂಡಿಸಿದೆ. ವರದಿಗಳ ಪ್ರಕಾರ, ಬೆಂಗಳೂರು ನಗರ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಶಿಕ್ಷಕರು (ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಮತ್ತು ಆನೇಕಲ್) ಶಿಕ್ಷಕರು ಮತದಾನ ಮಾಡಲಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫೆಬ್ರುವರಿ 23ರವರೆಗೆ ಮುಂದುವರಿಯಲಿದೆ. 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 135(ಸಿ) ಅಡಿಯಲ್ಲಿ ಮತ್ತು ಕರ್ನಾಟಕ ಅಬಕಾರಿ ನಿಯಮ 1967ರ 10 (ಬಿ)ಯನ್ನು ಪರಿಗಣನೆಗೆ ತೆಗೆದುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಉಪ ಆಯುಕ್ತ ಕೆ.ಎ.ದಯಾನಂದ್ ಅವರು ನಿಷೇಧವನ್ನು ಘೋಷಿಸಿದ್ದಾರೆ.