Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ – ಮದ್ಯದ ದರದಲ್ಲಿ ಏರಿಕೆ‌

ಬೆಂಗಳೂರು: ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದ್ದು, ಸಾಮಾನ್ಯ ಜನರು ಕುಡಿಯುವ ಮದ್ಯದ ದರದಲ್ಲಿ ಏರಿಕೆ‌ಯಾಗಿದೆ.

ಈಗಾಗಲೇ 17% ರಷ್ಟು ಎಲ್ಲಾ ಮಧ್ಯದ ಮೇಲೆ ದರ ಏರಿಕೆ ಮಾಡಲಾಗಿದ್ದು, ಈಗ ಮತ್ತೊಮ್ಮೆ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್​ಗಳ ದರ ಹೆಚ್ಚಳ ಮಾಡಲಾಗಿದೆ.

ಇನ್ನು ಮದ್ಯ ಉತ್ವಾದನ‌‌‌ ಕಂಪನಿಗಳು ಕ್ವಾಟರ್​ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿದ್ದು, ಬಾರ್ ಮಾಲೀಕರಿಗೆ ಮತ್ತು ಅಬಕಾರಿ ಇಲಾಖೆಗೆ ಮದ್ಯ ತಯಾರಿಕ ಕಂಪನಿಗಳು ಈಗಾಗಲೇ ಸಂದೇಶ ಕಳುಹಿಸಿವೆ.

ಓಟಿ(180 ಎಂಎಲ್): ಈ ಹಿಂದೆ 90 ರೂಪಾಯಿ, ಜನವರಿ 2 ರಿಂದ 111 ರೂಪಾಯಿ.
ಬಿಪಿ(180 ಎಂಎಲ್): ಹಿಂದೆ 110 ರೂಪಾಯಿ, ಇಂದಿನಿಂದ- 145 ರೂಪಾಯಿ.
8ಪಿಎಂ(180 ಎಂಎಲ್): ನಿನ್ನೆಯ ದರ 90 ರೂಪಾಯಿ, ಇಂದಿನ ದರ 111 ರೂಪಾಯಿ ಆಗಿದೆ.