Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಧುಗಿರಿ – ಭೀಕರ ರಸ್ತೆ ಅಪಘಾತಕ್ಕೆ ಮೂವರು ಯುವಕರ ದುರ್ಮರಣ

ಮಧುಗಿರಿ : ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಗ್ರಾಮದ ಬಳಿ ಸೋಮವಾರ ರಾತ್ರಿ ನಡೆದಿದೆ.

ಮೃತರನ್ನು ಪಾವಗಡ ತಾಲ್ಲೂಕಿನ ಗುಜ್ಜನುಡು ಗ್ರಾಮದ ಆಕಾಶ್ ( 26) , ಕಾರ್ತಿಕ್ (28) ಹೇಮಂತ್ (30) ಮೃತರು. ಗಾಯಾಳು ಉಜ್ವಲ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಪಾವಗಡಕ್ಕೆ ಹೋಗುತ್ತಿದ್ದ ಕಾರು ಪಾವಗಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ಭೀಕರತರೆ ಹೆಗಿದೆ ಎಂದರೇ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ಶವಗಾರದ‌ ಬಳಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.