Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಮಹಿಳಾ ಮೀಸಲಾತಿ ಮಸೂದೆ ನಮ್ಮದು’: ಸೋನಿಯಾ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ದೊರೆತಿದೆ. ಹೊಸ ಸಂಸತ್‌ ಭವನದಲ್ಲಿ ನಡೆಯುವ ಇಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಈ  ಮಧ್ಯೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮಹಿಳಾ ಮೀಸಲಾತಿ ಮಸೂದೆ ನಮ್ಮದು ಎಂದಿದ್ದಾರೆ. ಸಂಸತ್ತಿಗೆ ಪ್ರವೇಶಿಸುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮಹಿಳಾ ಮೀಸಲಾತಿ ಬಿಲ್‌ ನಮ್ಮದು,ನಮ್ಮದು ಎಂದು ಹೇಳಿದ್ದಾರೆ.

ಮಹಿಳಾ ಸಂಸದರು ಲೋಕಸಭೆಯಲ್ಲಿ 15% ಗಿಂತ ಕಡಿಮೆ ಪಾಲನ್ನು ಹೊಂದಿದ್ದಾರೆ. ಮಹಿಳೆಯರ ಪ್ರಾತಿನಿಧ್ಯವು ಅನೇಕ ರಾಜ್ಯಗಳ ವಿಧಾನಸಭೆಗಳಲ್ಲಿ 10% ಗಿಂತ ಕಡಿಮೆಯಾಗಿದೆ. ಈ ಮಸೂದೆಯನ್ನು ಆರಂಭದಲ್ಲಿ ಸೆಪ್ಟೆಂಬರ್ 12, 1996 ರಂದು ಸಂಸತ್ತಿನಲ್ಲಿ ಪರಿಚಯಿಸಲಾಗಿತ್ತು. ಆ ನಂತರ 2010ರ ಮಾರ್ಚ್‌ 9 ರಂದು ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಸಭೆಯಲ್ಲಿ ಈ ಮಸೂದೆಯನ್ನ ಅಂಗೀಕರಿಸಲಾಗಿತ್ತು. ಆದ್ರೆ ಲೋಕಸಭೆಯಲ್ಲಿ ಕೈಬಿಡಲಾಗಿತ್ತು