Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಹಿಳೆಯರಿಗೆ ‘ಉದ್ಯಮ ಶಕ್ತಿ’: ಸ್ವಸಹಾಯ ಸಂಘದ ಮೂಲಕ 100 ಪೆಟ್ರೋಲ್ ಬಂಕ್

ಬೆಂಗಳೂರು: ರಾಜ್ಯ ಸರ್ಕಾರವು ‘ಉದ್ಯಮ ಶಕ್ತಿ’ ಎಂಬ ಯೋಜನೆಯಡಿ 100 ಸ್ಥಳಗಳಲ್ಲಿ ಪೆಟ್ರೋಲ್‌ ಬಂಕ್‌ಗಳನ್ನು ಸ್ಥಾಪಿಸಲಾಗುವುದು. ಅವುಗಳನ್ನು ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ದಲಿತರಿಗೆ ಮಲ ತಿನ್ನಿಸಿ ಹೀನ ಕೃತ್ಯ: 7 ಮಂದಿ ಬಂಧನ

ಇಂದು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಈ ವಿಚಾರ ಪ್ರಕಟಿಸಿರುವ ಅವರು, ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದೊಂದಿಗೆ ಈ ಯೋಜನೆ ರೂಪಿಸಲಾಗುವುದು ಎಂದಿದ್ದಾರೆ. ಪೆಟ್ರೋಲ್‌ ಬಂಕ್‌ಗಳ ಸ್ಥಾಪನೆಗೆ ಪೆಟ್ರೋಲಿಯಂ ಕಂಪನಿಗಳು ಬಂಡವಾಳ ಹೂಡಲಿವೆ. ರಾಜ್ಯ ಸರ್ಕಾರವು ಪೆಟ್ರೋಲ್ ಬಂಕ್‌ ಸ್ಥಾಪನೆಗೆ ಭೂಮಿ ಒದಗಿಸುವುದರೊಂದಿಗೆ ತರಬೇತಿ, ಪರವಾನಗಿ, ಮತ್ತಿತರ ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ.