ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ FIR..!
ಬೆಂಗಳೂರು: ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ FIR ದಾಖಲಾಗಿದೆ.
2003ರ ವಿದ್ಯುತ್ ಕಾಯ್ದೆಯ ಸೆಕ್ಷನ್ 135 ಅಡಿಯಲ್ಲಿ ಕೇಸ್ ದಾಖಲಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆ ಬೆಂಗಳೂರಿನ ಜೆಪಿ ನಗರ ನಿವಾಸಕ್ಕೆ ಕುಮಾರಸ್ವಾಮಿ ಅವರು ವಿದ್ಯುತ್ ಅಲಂಕಾರ ಮಾಡಿದ್ದರು.
ಇದಕ್ಕೆ ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರು ಎಂದು ಆರೋಪಿಸಲಾಗಿದೆ. ವಿದ್ಯುತ್ ಕಳವು ಆರೋಪದ ಹಿನ್ನೆಲೆ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು.