ಮಾವು ಮತ್ತು ಬಾಳೆ ಬೆಳೆಯುವ ರೈತರಿಗೆ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಕಾರ್ಯಕ್ರಮ.!
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಫೆ.15ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲೆಯ ರೈತರಿಗೆ “ಮಾವು ಮತ್ತು ಬಾಳೆ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಬಬ್ಬೂರು ಫಾರಂ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ತಜ್ಞ ಡಾ. ಮಹಾಂತೇಶ್ ಮತ್ತು ಕೀಟ ಶಾಸ್ತ್ರತಜ್ಞ ಡಾ. ರುದ್ರಮುನಿ ಇವರು ಮಾವು ಮತ್ತು ಬಾಳೆ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳು, ಪೋಷಕಾಂಶಗಳ ನಿರ್ವಹಣೆ, ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡುವರು. ನಂತರ ಹಿರಿಯೂರು ತಾಲ್ಲೂಕಿನ ಭೀಮನಬಂಡೆ ಗ್ರಾಮದ ಪ್ರಗತಿಪರ ರೈತ ಬಿ.ಶಿವಮೂರ್ತಿ ಅವರು ಮಾವಿನ ಬೆಳೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ.
ಹೊಳಲ್ಕೆರೆ ತಾಲ್ಲೂಕಿನ ತಾಳ್ಯ ಹೋಬಳಿಯ ಕೆರೆಯಾಗಲಹಳ್ಳಿಯ ಕೆ.ಎಸ್.ರಾಮಸ್ವಾಮಿ ಅವರು ಬಾಳೆ ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಅನುಸರಿಸಿದ ವಿವಿಧ ಕ್ರಮಗಳ ಕುರಿತು ತಮ್ಮ ಅನುಭವ ಹಂಚಿಕೊಳ್ಳುವರು.
ಆಸಕ್ತ 50 ಜನ ರೈತ ಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ರಜನೀಕಾಂತ. ಆರ್ ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬಬ್ಬೂರು ಫಾರಂ (8277931058), ಉಷಾರಾಣಿ ಎಂ, ಸಹಾಯಕ ಕೃಷಿ ನಿರ್ದೇಶಕರು (ರೈ.ಮ) (9980730696), ಟಿ.ಪಿ. ರಂಜಿತಾ, ಕೃಷಿ ಅಧಿಕಾರಿ (8277930959), ಸಿಕಂದರ್ ಬಾಷಾ, ಕೃಷಿ ಅಧಿಕಾರಿ (8277931028) ಮತ್ತು ಪವಿತ್ರಾ ಎಂ. ಜೆ. (9535412286) ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.