Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಾವೋವಾದಿ ನಾಯಕ ಸೇರಿ 29 ಮಂದಿ ಎನ್‌ಕೌಂಟರ್‌ನಲ್ಲಿ ಹತ್ಯೆ

ನವದೆಹಲಿ : ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಭಾರೀ ಎನ್‌ಕೌಂಟರ್‌ ನಡೆದಿದೆ. ಮಾಹಿತಿ ಪ್ರಕಾರ ಎನ್‌ಕೌಂಟರ್‌ ದಾಳಿಯಲ್ಲಿ ಬಟ್ಟು 29 ಮಾವೋವಾದಿಗಳು ಬಲಿಯಾಗಿರುವ ವರದಿಯಾಗಿದೆ.

ಲೋಕಸಭಾ ಚುನಾವಣೆಯ ಸಮಯದಲ್ಲಿ ನಡೆದಿರುವ ದೊಡ್ಡ ಕಾರ್ಯಾಚರಣೆ ಇದಾಗಿದೆ. ಎನ್‌ಕೌಂಟರ್‌ನ ಗುಂಡಿನ ಚಕಮಕಿಯಲ್ಲಿ 3 ಮಂದಿ ಭದ್ರತಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದೆ.

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ನಡೆದ ದಾಳಿಯಲ್ಲಿ ನಕ್ಸಲ್ ನಾಯಕ ಶಂಕರ್ ರಾವ್ ಕೂಡ ಹತನಾಗಿದ್ದಾನೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಕಲ್ಯಾಣ್ ಎಲೆಸೆಲಾ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್‌ ವರಿಷ್ಠಾಧಿಕಾರಿ ಕಲ್ಯಾಣ್ ಎಲೆಸೆಲಾ, ಬಿನಗುಂದ ಮತ್ತು ಕೊರೊನಾರ್ ಗ್ರಾಮಗಳ ಮಧ್ಯೆ ಹಪಟೋಲಾ ಅರಣ್ಯದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗುಂಡಿನ ದಾಳಿ ನಡೆದಿದೆ. ಈ ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಗಾಯಗೊಂಡ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದೆ. ಈ ಹಿಂದೆ ನಕ್ಸಲ್ ನಾಯಕ ಶಂಕರ್ ರಾವ್ ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ಪೊಲೀಸರು ಮಾಹಿತಿ ನೀಡಿದ್ದರು. ಇದೀಗ ಎನ್‌ಕೌಂಟರ್‌ ದಾಳಿಯಲ್ಲಿ 29 ಮಾವೋವಾದಿಗಳು ಬಲಿಯಾಗಿದ್ದಾರೆ.