ಮಿನಿಕಾಯ್ ದ್ವೀಪದಲ್ಲಿ ಹೊಸ ವಿಮಾನ ನಿಲ್ದಾಣ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಂದಾಗಿ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಯ ನಡುವೆ, ಭಾರತವು ಈಗ ಲಕ್ಷದ್ವೀಪದ ಮಿನಿಕಾಯ್ ದ್ವೀಪದಲ್ಲಿ ಹೊಸ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದೆ ಎಂದು ತಿಳಿದು ಬಂದಿದೆ.
ವರದಿಯಾ ಪ್ರಕಾರ, ಈ ಯೋಜನೆ ಅಡಿಯಲ್ಲಿ ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪವನ್ನು ಪ್ರವಾಸೋದ್ಯ ತಾಣವನ್ನಾಗಿ ಮಾಡುವುದು ಮುಖ್ಯ ಗುರಿಯಾಗಿದೆ. ಇದರೊಂದಿಗೆ ವಾಯುನೆಲೆಯ ಅಭಿವೃದ್ಧಿಯೊಂದಿಗೆ ಅರಬ್ಬಿ ಸಮುದ್ರ ಮತ್ತು ಹಿಂದೂ ಮಹಾಸಾಗರದ ಪ್ರದೇಶದ ಮೇಲೆ ಕಣ್ಗಾವಲು ಸಾಮರ್ಥ್ಯಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ.
ಈ ಯೋಜನೆಗೆ ಹಲವು ವರ್ಷಗಳ ಹಿಂದೆಯೇ ಚಿಂತನೆ ನಡೆಸಲಾಗಿದ್ದು, ಆದರೆ ಇದೀಗ ಮಾಲ್ಡೀವ್ಸ್ ನ ವಿವಾದ ನಡುವೆ ಈ ವಿಚಾರ ಬೆಳಕಿಗೆ ಬಂದಿದೆ. ಇನ್ನು ಲಕ್ಷ ದ್ವೀಪದ ವಿಮಾನ ನಿಲ್ದಾಣದಲ್ಲಿ ಕೇವಲ ನಾಗರಿಕ ವಿಮಾನಗಳು ಮಾತ್ರವಲ್ಲದೇ, ಫೈಟರ್ ಜೆಟ್ಗಳು, ಮಿಲಿಟರಿ ಸಾರಿಗೆ ವಿಮಾನಗಳು ಮತ್ತು ವಾಣಿಜ್ಯ ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿರುವ ಜಂಟಿ ಏರ್ಫೀಲ್ಡ್ ಸಿದ್ಧಪಡಿಸುವ ಯೋಜನೆಗಳನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ ಎಂದು ವರದಿಯಾಗಿದೆ.