Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಮುಂದಿನ 6 ತಿಂಗಳಲ್ಲಿ ಎಲ್ಲ ಬ್ಯಾಕ್‍ಲಾಗ್ ಹುದ್ದೆ ಭರ್ತಿ ಮಾಡಬೇಕು’ – ಹೈಕೋರ್ಟ್ ಆದೇಶ

ಬೆಂಗಳೂರು: ಮುಂದಿನ ಆರು ತಿಂಗಳಲ್ಲಿ ಎಲ್ಲ ಇಲಾಖೆಗಳಲ್ಲಿ ಖಾಲಿಯಿರುವ ಬ್ಯಾಕ್‍ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರಕಾರಿ ಸೇವೆಯಲ್ಲಿ ಆ ಸಮುದಾಯಗಳಿಗೆ ಕಲ್ಪಿಸಿದ ಪ್ರಾತಿನಿಧ್ಯ ಕಸಿದುಕೊಂಡಂತೆ ಎಂದು ಹೈಕೋರ್ಟ್ ಹೇಳಿದೆ.

ಇನ್ನು ಬೆಂಗಳೂರಿನ ಪಟ್ಟಂದೂರು ಅಗ್ರಹಾರದ ನಿವಾಸಿ ಎಂ.ಮಂಜುನಾಥ್ ಪ್ರಸಾದ್ ಎಂಬುವರು ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಈ ತೀರ್ಪು ನೀಡಿದೆ.