‘ಮುಂಬರುವ ಅಧಿವೇಶದಲ್ಲಿ ಯುಸಿಸಿ ಮಸೂದೆ ಮಂಡನೆ’- ಪುಷ್ಕರ್ ಸಿಂಗ್ ಧಾಮಿ
ನವದೆಹಲಿ:ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಯುಸಿಸಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.
ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಸಿದ್ಧಪಡಿಸಲು ರಚಿಸಲಾದ ಸಮಿತಿಯು ಫೆಬ್ರವರಿ 2 ರಂದು ರಾಜ್ಯ ಸರ್ಕಾರಕ್ಕೆ ತನ್ನ ಕರಡನ್ನು ಸಲ್ಲಿಸಲಿದೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ `ಏಕ್ ಭಾರತ್, ಶ್ರೇಷ್ಠ ಭಾರತ್’ ಯೋಜನೆಯ ಭಾಗವಾಗಿ ರಾಜ್ಯದಲ್ಲಿ ಯುಸಿಸಿಯನ್ನು ಜಾರಿಗೆ ತರಲು ಸರ್ಕಾರ ಯಾವಾಗಲೂ ಬದ್ಧವಾಗಿದೆ ಎಂದು ಬರೆದುಕೊಂಡಿದ್ದಾರೆ.
ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಯುಸಿಸಿ ಸಮಿತಿಯ ಅವಧಿಯು ಜನವರಿ 26 ರಂದು ಕೊನೆಗೊಂಡಿದೆ. ಸಮಿತಿಯ ಅವಧಿಯನ್ನು ಈಗಾಗಲೇ ಮೂರು ಬಾರಿ ವಿಸ್ತರಿಸಲಾಗಿದೆ. ಫೆಬ್ರವರಿ 2 ರಂದು ತನ್ನ ಅಂತಿಮ ವರದಿಯನ್ನು ಸರ್ಕಾರಕ್ಕೆ ಹಸ್ತಾಂತರ ಮಾಡಲಿದೆ ಎಂದು ಮಾಹಗಿತಿ ಹಂಚಿಕೊಂಡಿದ್ದಾರೆ.