Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮುಂಬೈ : ಕಂಟೈನರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಟೆಂಪೋ ಟ್ರಾವೆಲರ್ – 12 ಜನರ ದುರ್ಮರಣ

ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್ ವೇಯಲ್ಲಿ ಟೆಂಪೋ ಟ್ರಾವೆಲರ್‌ವೊಂದು ಕಂಟೈನರ್‌ಗೆ ಡಿಕ್ಕಿ ಹೊಡೆದ ಪರಿಣಾಮ 12 ಜನ ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಟಿಟಿ ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ. ಟಿಟಿಯಲ್ಲಿ ಒಟ್ಟು 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಮುಂಬೈನಿಂದ ಸುಮಾರು 350 ಕಿಲೋ ಮೀಟರ್ ದೂರದಲ್ಲಿರುವ ಜಿಲ್ಲೆಯ ವೈಜಾಪುರ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಟಿಟಿ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಂಟೈನರ್ ಹಿಂಬದಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ 12 ಪ್ರಯಾಣಿಕರು ಸಾವನ್ನಪ್ಪಿದ್ದು, ಅದರಲ್ಲಿ ಐವರು ಪುರುಷರು, ಆರು ಮಹಿಳೆಯರು ಮತ್ತು ಒಬ್ಬಳು ಅಪ್ರಾಪ್ತ ಬಾಲಕಿ ಎಂದು ಗುರುತಿಸಲಾಗಿದೆ. ಉಳಿದ 23 ಮಂದಿ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.