ಮುರುಘಾಶ್ರೀ ಬಂಧನಕ್ಕೆ ಆದೇಶ.!
ಚಿತ್ರದುರ್ಗ: ಕೆಲ ದಿನಗಳ ಹಿಂದಷ್ಟೇ ಬಾಲಕಿಯರ ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಡಾ. ಶಿವಮೂರ್ತಿ ಶರಣರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಪೋಕೋ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ ಆದೇಶವನ್ನು ಅನ್ನು ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀಡಿದೆ. ಸ್ವಾಮೀಜಿಯನ್ನು ಕೂಡಲೇ ಬಂಧಿಸುವಂತೆ ಆದೇಶ ನೀಡಿದೆ.!