Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ

ಚಿತ್ರದುರ್ಗ: 2023-24ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎಸ್.ಎಸ್.ಪಿ ಪೋರ್ಟಲ್)  ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ವ್ಯಾಪ್ತಿಯಲ್ಲಿ  ವಿದ್ಯಾಭ್ಯಾಸ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ತಾವುಗಳು ವ್ಯಾಸಂಗ ಮಾಡುತ್ತಿರುವ ಶಾಲೆ, ಶಿಕ್ಷಣ ಸಂಸ್ಥೆಗಳ ಮುಖಾಂತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ವೆಬ್‍ಸೈಟ್ https://ssp.karnataka.gov.in/  ನಲ್ಲಿ  ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ ಅರ್ಜಿಯ ಒಂದು ಪ್ರತಿಯನ್ನು ಆಯಾ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದೇಶ ಪುನರ್ವಸತಿ ಕಾರ್ಯಕರ್ತರು ಅಥವಾ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

ಮಾಹಿತಿಗಾಗಿ  ತಾಲ್ಲೂಕು ಪಂಚಾಯ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದ್ದೊದ್ದೇಶ ಪುನರ್ವಸತಿ ಕಾರ್ಯಕರ್ತರ ದೂರವಾಣಿ ಸಂಖ್ಯೆ ದೂರವಾಣಿ ಸಂಖೆ ಚಿತ್ರದುರ್ಗ-9880821934, ಚಳ್ಳಕೆರೆ-9611266930, ಹಿರಿಯೂರು-9902888901, 9902898901 ಹೊಳಲ್ಕೆರೆ- 9740030227, ಹೊಸದುರ್ಗ – 9741829990, ಮೊಳಕಾಲ್ಮೂರು-9742725576 ಗಳನ್ನು ಸಂಪರ್ಕಿಸಬಹುದಾಗಿದೆ,

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-235284 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.