Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮೊದಲು ಮುಸ್ಲಿಮ್‌ರು ಹಿಂದೂಗಳಾಗಿದ್ದರು, ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು – ಗುಲಾಂ ನಬಿ ಆಜಾದ್

ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು, ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಭಾರತದ ಯಾರೂ ಹೊರಗಿನವರಲ್ಲ, ನಾವೆಲ್ಲರೂ ಈ ದೇಶಕ್ಕೆ ಸೇರಿದವರು, ಭಾರತದ ಮುಸ್ಲಿಮರು ಮೂಲತಃ ಹಿಂದೂಗಳು, ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರು ಎಂದಿದ್ದಾರೆ. ಭಾರತೀಯ ಮುಸ್ಲಿಮರ ಬಗ್ಗೆ ಮಾತನಾಡಿದ ಆಜಾದ್, ಹಿಂದೂಗಳಂತೆಯೇ ಮುಸ್ಲಿಮರು ಕೂಡ ಈ ನೆಲದೊಳಗೆ ಹೋಗುತ್ತಾರೆ. ಅವರ ದೇಹ ಹಾಗೂ ಎಲುಬುಗಳು ಕೂಡ ಭಾರತ ಮಾತೆಯ ಭಾಗವಾಗುತ್ತದೆ, ಹಾಗಿದ್ದಾಗ ಹಿಂದೂ-ಮುಸ್ಲಿಂ ಎನ್ನುವ ಭಾವನೆ ಏಕೆ ಎಂದು ಪ್ರಶ್ನಿಸಿದರು. 600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ಮಾತ್ರ ಇದ್ದರು ಎಂದು ಹೇಳುತ್ತಾರೆ. ನಂತರ ಜನರು ಮತಾಂತರಗೊಂಡು ಮುಸ್ಲಿಮರಾದರು. ಜನರು ಸಹೋದರತೆ, ಶಾಂತಿ, ಐಕ್ಯತೆಯನ್ನು ಕಾಪಾಡುವಂತೆ ಮನವಿ ಮಾಡಿದ ಆಜಾದ್, ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಬಾರದು, ಜನರು ಧರ್ಮದ ಹೆಸರಿನಲ್ಲಿ ಮತ ಹಾಕಬಾರದು ಎಂದು ಹೇಳಿದರು.