Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಮೋದಿಗೆ ಮಣಿಪುರಕ್ಕಿಂತ ಇಸ್ರೇಲ್​ ಮೇಲೆ ಹೆಚ್ಚು ಆಸಕ್ತಿ ಇದ್ದಂತಿದೆ’ – ರಾಹುಲ್ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಣಿಪುರಕ್ಕಿಂತ ಇಸ್ರೇಲ್ ಮೇಲೆಯೇ ಹೆಚ್ಚು ಆಸಕ್ತಿ ಇದ್ದಂತೆ ಕಾಣುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಮೋದಿಯವರಿಗೆ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕಿಂತ ಇಸ್ರೇಲ್​-ಹಮಾಸ್ ಯುದ್ಧದ ಬಗೆಗಿನ ಆಸಕ್ತಿಯೇ ಹೆಚ್ಚಿದ್ದಂತೆ ಕಾಣುತ್ತಿದೆ ಎಂದರು.

ಇನ್ನು ಪ್ರಧಾನಿ ಮತ್ತು ಭಾರತ ಸರ್ಕಾರವು ಇಸ್ರೇಲ್​ನಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ತುಂಬಾ ಆಸಕ್ತಿ ಹೊಂದಿದೆ, ಆದರೆ ಮಣಿಪುರದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಆಸಕ್ತಿ ಇಲ್ಲ ಎಂಬುದು ನನಗೆ ಆಶ್ಚರ್ಯಕರವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.