Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಹನವಾಜ್ ಅರೆಸ್ಟ್

ನವದೆಹಲಿ: ದೆಹಲಿ ಪೊಲೀಸ್ ವಿಶೇಷ ದಳವು ಎನ್ಐಎಯ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಹನವಾಜ್ ಅಲಿಯಾಸ್ ಶಫಿ ಉಜ್ಜಾಮಾನನ್ನು ಬಂಧಿಸಿದೆ. ಪುಣೆ ಐಸಿಸ್ ಪ್ರಕರಣದ ಆರೋಪಿ ಉಗ್ರ ಶಹನವಾಜ್ ಬಂಧನಕ್ಕಾಗಿ ಎನ್‌ಐಎ 3 ಲಕ್ಷ ರೂಪಾಯಿ ಬಹುಮಾನ ನೀಡಿತ್ತು. “ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಶಹನವಾಜ್ ದೆಹಲಿಯ ನಿವಾಸಿಯಾಗಿದ್ದು, ಪುಣೆ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ದೆಹಲಿಯಲ್ಲಿ ವಾಸಿಸುತ್ತಿದ್ದ” ಎಂದು ಪೊಲೀಸರು ತಿಳಿಸಿದ್ದಾರೆ.